ಯಡಿಯೂರಪ್ಪ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಕೆ.ಎಸ್.ಈಶ್ವರಪ್ಪ

ಬುಧವಾರ, 12 ಅಕ್ಟೋಬರ್ 2016 (14:15 IST)
ಬಿ.ಎಸ್.ಯಡಿಯೂರಪ್ಪ ರಾಜ್ಯಾಧ್ಯಕ್ಷರಾದ ಬಳಿಕ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಮತ್ತೆ ಬಿಎಸ್‌ವೈ ವಿರುದ್ಧ ಹರಿಹಾಯ್ದಿದ್ದಾರೆ.
 
ದಾವಣಗೆರೆಯಲ್ಲಿರುವ ಮಾಜಿ ಸಚಿವ ರವೀಂದ್ರನಾಥ್ ನಿವಾಸಕ್ಕೆ ಭೇಟಿ ನೀಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈ ಬಿಡುವಂತೆ ನನಗೆ ಯಾರು ಹೇಳಿಲ್ಲ ಎಂದು ಹೇಳಿದರು.
 
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಮ್‌ಲಾಲ್ ಅವರು ರಾಯಣ್ಣ ಬ್ರಿಗೇಡ್ ಕೈಬಿಟ್ಟು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರೊಂದಿಗೆ ಚರ್ಚಿಸಿ ಎಂದು ಸೂಚನೆ ನೀಡಿದ್ದರು. ದಲಿತ ಮಠಾಧೀಶರು ನಮ್ಮ ಬೆಂಬಲ ನೀಡಿದ್ದಾರೆ. ರಾಜಕೀಯವಾಗಿ ರಾಯಣ್ಣ ಬ್ರಿಗೇಡ್‌ ಬಳಸಿಕೊಳ್ಳದಿದ್ದರೇ ನಾವು ನಿಮ್ಮ ಬೆಂಬಲಕ್ಕಿರುತ್ತೇವೆಂದು ಭರವಸೆ ನೀಡಿದ್ದಾರೆ ಎಂದು ಈಶ್ವರಪ್ಪ ತಿಳಿಸಿದರು.  
 
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ವೇದಿಕೆ ಬಿಟ್ಟು ಪ್ರತ್ಯೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೈಬಿಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ಲಾಲ್ ಅವರು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರಿಗೆ ತಾಕೀತು ಮಾಡಿದ್ದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ