ಬಿ.ಎಸ್.ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ಗುಡುಗಿದ ಈಶ್ವರಪ್ಪ
ಶನಿವಾರ, 11 ಫೆಬ್ರವರಿ 2017 (13:43 IST)
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆಗೆ ಪ್ರಧಾನಿ ನರೇಂದ್ರ ಮೋದಿಯನ್ನು ಕರೆಸೋಣ ಎಂದು ಬಿ.ಎಸ್.ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ.
ಶಾಸಕರ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ, ಬ್ರಿಗೇಡ್ ಸಭೆಗೆ ಪ್ರಧಾನಿ ಮೋದಿ ಅಥವಾ ಅಮಿತ್ ಶಾ ಅವರನ್ನು ಕರೆಸೋಣ. ಯಾವುದೇ ಕಾರಣಕ್ಕೂ ಬ್ರಿಗೇಡ್ ನಿಲ್ಲುವುದಿಲ್ಲ ಎಂದು ಘೋಷಿಸಿದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ನಾನು ನೇರವಾಗಿ ಬ್ರಿಗೇಡ್ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ. ಇಂದು ಸಭೆಯಲ್ಲಿ ಮುಂದಿನ ಚಟುವಟಿಕೆಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗದಂತೆ ನಡೆದುಕೊಳ್ಳಲು ತಿಳಿಸಿದ್ದಾರೆ. ಅದನ್ನು ಯಡಿಯೂರಪ್ಪ ಕೂಡಾ ಒಪ್ಪಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಈಶ್ವರಪ್ಪ ಪಾಲ್ಗೊಳ್ಳುವ ಮೂಲಕ ಮತ್ತೆ ಯಡಿಯೂರಪ್ಪಗೆ ಟಾಂಗ್ ನೀಡಿದ್ದು, ಮತ್ತೆ ವಿರಸ ಉಲ್ಬಣಿಸುವ ಸಾಧ್ಯತೆಗಳಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.