ಕೆ.ಎಸ್.ಈಶ್ವರಪ್ಪ ಮುಂದಿನ ಮುಖ್ಯಮಂತ್ರಿ: ಬಿಜೆಪಿ ಪಾಳಯದಲ್ಲಿ ಹೊಸ ಬಾಂಬ್

ಶುಕ್ರವಾರ, 6 ಜನವರಿ 2017 (15:30 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಿರುವುದಾಗಿ ಹೇಳುತ್ತಾ ಬಂದಿದ್ದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಇದೀಗ ತಾವೇ ಮುಖ್ಯಮಂತ್ರಿಯಾಗಲು ಹೊರಟಿದ್ದಾರೆ.
 
ರಾಯಣ್ಣ ಬ್ರಿಗೇಡ್ ಸದಸ್ಯರು ಕೆ.ಎಸ್.ಈಶ್ವರಪ್ಪ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ಭಿತ್ತಿಪತ್ರಗಳನ್ನು ಹಂಚುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ. 
 
ರಾಯಣ್ಣ ಬ್ರಿಗೇಡ್‌ನ ಚಟುವಟಿಕೆಗಳನ್ನು ನಿಲ್ಲಿಸುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿತ್ತು. ಆದರೆ, ಇದೀಗ ರಾಯಣ್ಣ ಬ್ರಿಗೇಡ್ ಸದಸ್ಯರು ಮುಂದಿನ ಮುಖ್ಯಮಂತ್ರಿ ಈಶ್ವರಪ್ಪ ಅವರೇ ಎಂಬ ಭಿತ್ತಿಪತ್ರಗಳನ್ನು ಹಂಚುತ್ತಿರುವ ಮೂಲಕ ರಾಜ್ಯ ಬಿಜೆಪಿ ಪಾಳಯದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ