ಕಮಲ ಪಾಳಯದಲ್ಲಿ ಬ್ರಿಗೇಡ್ ತಳಮಳ...ಪಕ್ಷದಿಂದ ಈಶ್ವರಪ್ಪ ಬೆಂಬಲಿಗ ಅಮಾನತು

ಮಂಗಳವಾರ, 10 ಜನವರಿ 2017 (15:36 IST)
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರನ್ನು ಬಿಜೆಪಿ ಪಾಳಯದಿಂದ ಅಮಾನತು ಮಾಡಲಾಗಿದೆ.
ರಾಯಣ್ಣ ಬ್ರಿಗೇಡ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ವೆಂಕಟೇಶ ಮೂರ್ತಿ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಿ ಬೆಂಗಳೂರು ನಗರದ ಬಿಜೆಪಿ ಜಿಲ್ಲಾಧ್ಯಕ್ಷ ಸದಾಶಿವ ಆದೇಶ ಹೊರಡಿಸಿದ್ದಾರೆ.
 
ಪಕ್ಷ ವಿರೋಧಿ ಕೆಲಸದಲ್ಲಿ ತೊಡಗಿದ ಹಿನ್ನೆಲೆಯಲ್ಲಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
 
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಮೇಯರ್ ವೆಂಕಟೇಶ ಮೂರ್ತಿ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ಬಿಜೆಪಿಯ ಹಲವು ನಾಯಕರು ಇದ್ದಾರೆ. ಆದರೆ, ನನ್ನನ್ನು ಮಾತ್ರ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಅಧ್ಯಕ್ಷರನ್ನು ಕೇಳುತ್ತೇನೆ ಎಂದಿದ್ದಾರೆ. 
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರನ್ನು ಅಮಾನತು ಮಾಡುವ ಮೂಲಕ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಪರೋಕ್ಷ ಎಚ್ಚರಿಕೆ ನೀಡಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ