ಸಂಗೋಳ್ಳಿ ರಾಯಣ್ಣ ಬ್ರಿಗೇಡ್: ಯಡಿಯೂರಪ್ಪಗೆ ತಿರುಗೇಟು ನೀಡಿದ ಕೆ.ಎಸ್. ಈಶ್ವರಪ್ಪ

ಬುಧವಾರ, 17 ಆಗಸ್ಟ್ 2016 (18:06 IST)
ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ತಪ್ಪಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್‌ ಹೇಳಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ತಿರುಗೇಟು ನೀಡಿದ್ದಾರೆ.
 
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿ ಮುರಳಿಧರ್ ರಾವ್ ಅವರು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ತಪ್ಪಲ್ಲ ಎಂದು ಸೂಚನೆ ನೀಡಿದ್ದಾರೆ ಎಂದರು.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಟಾಂಗ್ ನೀಡಿರುವ ಕೆ.ಎಸ್‌.ಈಶ್ವರಪ್ಪ, ನಾಳೆ ಮತ್ತು 'ಹಿಂದ್' ಸಮಾವೇಶ ನಡೆಸಲು ಮುಂದಾಗಿದ್ದಾರೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ .

ವೆಬ್ದುನಿಯಾವನ್ನು ಓದಿ