ಯಡಿಯೂರಪ್ಪಗೆ ಸೆಡ್ಡು ಹೊಡೆದ ಕೆ.ಎಸ್‌.ಈಶ್ವರಪ್ಪ

ಗುರುವಾರ, 18 ಆಗಸ್ಟ್ 2016 (10:16 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಸೆಡ್ಡು ಹೊಡೆದಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, 'ಹಿಂದ' ಸಭೆ ನಡೆಸಲು ಮುಂದಾಗಿದ್ದಾರೆ.
 
ಬಿ.ಎಸ್.ಯಡಿಯೂರಪ್ಪನವರ ವಿರೋಧದ ಮಧ್ಯಯೇ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಇಂದು ಮುಂಜಾನೆ 11 ಗಂಟೆಗೆ ಶಾಸಕರ ಭವನದಲ್ಲಿ 'ಹಿಂದ' ಸಭೆ ನಡೆಯಲಿದೆ.
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
 
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ .

ವೆಬ್ದುನಿಯಾವನ್ನು ಓದಿ