ಸರಕಾರ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಪಿಕ್‌ಪಾಕೆಟ್ ಪ್ರಕರಣದಂತೆ ನೋಡುತ್ತಿದೆ: ಈಶ್ವರಪ್ಪ

ಸೋಮವಾರ, 9 ಜನವರಿ 2017 (11:42 IST)
ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ರಾಜ್ಯ ಸರಕಾರ ಪಿಕ್‌ಪಾಕೆಟ್ ಪ್ರಕರಣದಂತೆ ನೋಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.
 
ಶಿವಮೊಗ್ಗದಲ್ಲಿ ಸುದ್ದಿಗಾರಗೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ರಾಜ್ಯ ಸರಕಾರ ಕೇವಲವಾಗಿ ನೋಡುತ್ತಿದೆ. ಗೃಹ ಇಲಾಖೆಗೂ ಅದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಿದೆ ಎಂದು ಕಿಡಿಕಾರಿದರು.
 
ಗೃಹ ಸಚಿವ ಡಾ.ಜಿ.ಪರಮೇಶ್ವರ ಇಂತಹ ಹೀನ ಕೃತ್ಯಗಳನ್ನು ತಡೆಗಟ್ಟಬೇಕು. ಅವರಿಗೆ ಆಸಕ್ತಿಯಿಲ್ಲದಿದ್ದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬರಲಿ ಎಂದು ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು. 
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರ ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ