ಎಚ್‌ಡಿಕೆ ಆರೋಗ್ಯದ ಬಗ್ಗೆ ಕೈ ಶಾಸಕ ವ್ಯಂಗ್ಯ: ಕಾಂಗ್ರೆಸ್‌ಗೆ ಸೋಲಿನ ಹತಾಶೆ ಎಂದ ಆರ್.ಅಶೋಕ್

Sampriya

ಶನಿವಾರ, 30 ಮಾರ್ಚ್ 2024 (15:05 IST)
Photo Courtesy X
ಬೆಂಗಳೂರು:  ಕರ್ನಾಟಕದ ಕಾಂಗ್ರೆಸ್ ಸರ್ಕಾರ ಒಬ್ಬ ವ್ಯಕ್ತಿಯ ಆರೋಗ್ಯದ ಬಗ್ಗೆ ಕೂಡ ರಾಜಕೀಯ ಮಾಡುವಷ್ಟು ಕೀಳು ಮಟ್ಟಕ್ಕೆ ಇಳಿದಿದೆ ಅಂದರೆ ಅವರ ಸೋಲಿನ ಹತಾಶೆ, ಅಸೂಯೆ ಯಾವ ಪರಾಕಾಷ್ಠೆಗೆ ತಲುಪಿದೆ ನೋಡಿ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಮಂಡ್ಯ ಜಿಲ್ಲೆಯ ಮಳ್ಳವಯಲ್ಲಿ ನಡೆದ ಕಾಂಗ್ರೆಸ್​ ಕಾರ್ಯಕರ್ತರ ಸಮಾವೇಶದಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ರಮೇಶ್​ ಬಂಡಿಸಿದ್ದೇಗೌಡ ಅವರು ಎಚ್‌ಡಿಕೆ ಆರೋಗ್ಯದ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದರು.

ಸಚಿವ ಚಲುವರಾಯಸ್ವಾಮಿ ಅವರಿಗೆ ಇರುವ ಕಾಯಿಲೆ ಹೆಚ್​ಡಿ ಕುಮಾರಸ್ವಾಮಿಯವರಿಗೂ ಇದೆ.  ಚಲುವರಾಯಸ್ವಾಮಿ ಆಸ್ಪತ್ರೆಗೆ ದಾಖಲಾದರೆ ಒಂದು ತಿಂಗಳು ಆಚೆ ಬರಲ್ಲ. ಆದರೆ, ಹೆಚ್​ಡಿ ಕುಮಾರಸ್ವಾಮಿ ಹೇಗೆ ಶಸ್ತ್ರಚಿಕಿತ್ಸೆಯಾದ ಎರಡೇ ದಿನಕ್ಕೆ ರಾಜ್ಯ ಸುತ್ತುತ್ತಾರೆ. ಈ ಹೊಸ ಟೆಕ್ನಿಕ್​ ಹೇಗೆ ಎಂದು ನನಗೆ ತಿಳಿಯುತ್ತಿಲ್ಲ ಎಂದು ಟೀಕಿಸಿದ್ದಾರೆ.

ಈ ಬಗ್ಗೆ   ಪ್ರತಿಕ್ರಿಯಿಸಿದ ಆರ್‌.ಅಶೋಕ್ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಒಬ್ಬ ವ್ಯಕ್ತಿಯ ಆರೋಗ್ಯದ ಬಗ್ಗೆ ಕೂಡ ರಾಜಕೀಯ ಮಾಡುವಷ್ಟು ಕೀಳು ಮಟ್ಟಕ್ಕೆ @INCKarnataka
 ಪಕ್ಷ ಇಳಿದಿದೆ ಅಂದರೆ ಅವರ ಸೋಲಿನ ಹತಾಶೆ, ಅಸೂಯೆ ಯಾವ ಪರಾಕಾಷ್ಠೆಗೆ ತಲುಪಿದೆ ನೋಡಿ.

ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಅವರಿಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ, ಸನ್ಮಾನ್ಯ ದೇವೇಗೌಡರಿಗೆ, ಕುಮಾರಸ್ವಾಮಿ ಅವರಿಗೆ ಮಾಡುತ್ತಿರುವ ನಿಂದನೆ, ಬಳಸುತ್ತಿರುವ ಪದ ಪ್ರಯೋಗ ನೋಡಿದರೆ "ವಿನಾಶ ಕಾಲೇ ವಿಪರೀತ ಬುದ್ಧಿ" ಎನ್ನುವಂತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ