ಜಿಲ್ಲೆಗೆ ಕಾಲಿಡದ ಸಚಿವ ಗೋವಿಂದ ಕಾರಜೋಳಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಕಲಬುರಗಿ ಜನ
ಬುಧವಾರ, 18 ಮಾರ್ಚ್ 2020 (10:43 IST)
ಬೆಂಗಳೂರು : ಕಲಬುರಗಿ ಜಿಲ್ಲೆಯ ಜನರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದರೂ ಜಿಲ್ಲೆಯ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ವಿರುದ್ಧ ಜಿಲ್ಲೆಯ ಜನರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೊನಾಗೆ ಮೊದಲ ಬಲಿ ಕಲಬುರಗಿಯಲ್ಲಿ ಆಗಿದ್ದ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಜಿಲ್ಲೆಗೆ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಿದ್ದಾರೆ. ಆದರೆ ಜಿಲ್ಲೆಯ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಜಿಲ್ಲೆಗೆ ಇದುವರೆಗೂ ಭೇಟಿ ನೀಡದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜೊತೆ ಮಾತನಾಡುತ್ತಿದ್ದಾರೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಜನರು ಸಚಿವರ ವಿರುದ್ಧ ಗರಂ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಚಿವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಕಿಡಿಕಾರಿದ್ದಾರೆ.