ಕಳಸಾ ಬಂಡೂರಿ ಹೋರಾಟಕ್ಕೆ ಒಂದು ವರ್ಷ: ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ ಬಂದ್

ಶನಿವಾರ, 16 ಜುಲೈ 2016 (11:00 IST)
ಕಳಸಾ ಬಂಡೂರಿ ಹಾಗೂ ಮಹಾದಾಯಿ ನದಿ ಜೋಡಣೆ ಅನುಷ್ಠಾನಕ್ಕೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರೈತ ಪರ ಹೋರಾಟಗಾರರು ಇಂದು ಧಾರವಾಡ, ಬೆಳಗಾವಿ, ಗದಗ ಮತ್ತು ಬಾಗಲಕೋಟೆ ಜಿಲ್ಲಾ ಬಂದ್‌ಗೆ ಕರೆ ನೀಡಿದ್ದಾರೆ.
  
ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಹೋರಾಟದ ಮೂಲ ಉದ್ದೇಶ ಈಡೇರಿಲ್ಲ ಎಂದು ಹೋರಾಟಗಾರರು ಶನಿವಾರ ಕರಾಳ ದಿನ ಆಚರಿಸಲು ನಿರ್ಧರಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳು ನಗರದ ಜುಬ್ಲಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ್ದು, ಟೈಯರ್‌ಗೆ ಬೆಂಕಿ ಹಚ್ಚಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಬೆಳಗಾವಿಯಲ್ಲೂ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿವಿಧ ರೈತ ಪರ ಸಂಘಟನೆಗಳು ಪ್ರತಿಭಟನೆಗಳು ಕೈಗೊಂಡಿದ್ದಾರೆ. ನಗರದ ಬಸ್ ನಿಲ್ದಾಣದ ಬಳಿ ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಹನ ಸಂಚಾರ ಸಂಪೂರ್ಣ ವ್ಯತ್ಯಯಗೊಂಡಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ