ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಪುಕ್ಕಲ ಎಂದು ಹೇಳಿಕೆ ನೀಡಿರುವ ಸಚಿವ ರಮಾನಾಥ್ ರೈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.
ವಿಧಾನಸಭೆಯ ಅಧಿವೇಶನ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶೆಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಸಚಿವ ರೈ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
ಶೆಟ್ಟರ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಶಾಸಕ ಅಭಯಚಂದ್ರ ಜೈನ್, ಸಚಿವರು ಅಲ್ಲಿನ ಪರಿಸ್ಥಿತಿಕ್ಕೆ ತಕ್ಕಂತೆ ಹೇಳಿಕೆ ನೀಡಿದ್ದಾರೆ. ಅವರಿಗೆ ಯಾರನ್ನು ಟಾರ್ಗೆಟ್ ಮಾಡುವ ಉದ್ದೇಶವಿಲ್ಲ ಎಂದು ತಿರುಗೇಟು ನೀಡಿದರು.
ಯಾರಾದರೂ ಪ್ರಚೋದನಾಕಾರಿ ಭಾಷಣ ಮಾಡಿದರೆ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರಲ್ಲಿ ಯಾವ ತಪ್ಪಿದೆ. ಅನಗತ್ಯವಾಗಿ ಸಚಿವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲಾಗುತ್ತಿದೆ ಎಂದು ಶಾಸಕ ಅಭಯ ಚಂದ್ರ ಜೈನ್ ಆರೋಪಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.