ಕನ್ನಡ ರಾಜ್ಯೋತ್ಸವದಂದು ಶಾಲೆಗಳು, ಕಂಪನಿಗಳಲ್ಲಿ ಕನ್ನಡ ಬಾವುಟ ಹಾರಾಟ ಕಡ್ಡಾಯ: ಡಿಕೆಶಿ

Sampriya

ಶುಕ್ರವಾರ, 11 ಅಕ್ಟೋಬರ್ 2024 (15:45 IST)
ಬೆಂಗಳೂರು: ಕನ್ನಡ ರಾಜ್ಯೋತ್ಸವದಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಕಂಪನಿಗಳು, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನವೆಂಬರ್‌ 1ರಂದು ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಾಗಿ ಕನ್ನಡ ಬಾವುಟ ಹಾರಿಸಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಚರಣೆ ಮಾಡಿ ನಿಮ್ಮ ಸಂಸ್ಥೆಯಲ್ಲಿ ಏನು ಮಾಡಿದ್ದೀರಿ ಎನ್ನುವುದಕ್ಕೆ ನಾವು ನೀಡುವ ನಂಬರ್‌ಗೆ ಪೋಸ್ಟ್ ಮಾಡಬೇಕು. ಕನ್ನಡ ಭೂಮಿಯಲ್ಲಿ ಕನ್ನಡ ಕಲಿಯಬೇಕಾಗಿರೋದು ಎಲ್ಲರಿಗೂ ಕಡ್ಡಾಯ ಎಂದರು.

ಕನ್ನಡ ಬಾವುಟ ಕಡ್ಡಾಯ ಮಾಡಿದ್ದನ್ನು ಕನ್ನಡ ಸಂಘಟನೆಗಳು ದುರುಪಯೋಗ ಮಾಡಿಕೊಳ್ಳಬಾರದು. ಕಾರ್ಖಾನೆ, ಕಂಪನಿಗಳಿಗೆ ಒತ್ತಡ, ಕಿರುಕುಳ ನೀಡಬಾರದು ಎಂದು ತಾಕೀತು ಮಾಡಿದರು.

 ಕನ್ನಡ ಸಂಘಟನೆಗಳು ಯಾರಿಗೂ ಹೆದರಿಸಬಾರದು. ಹಾಗೆ ಏನಾದರೂ ಒತ್ತಡ ಹೇರಿದರೆ ಅಂತಹ ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ