ಕರ್ನಾಟಕದಲ್ಲಿ ಕನ್ನಡ ಕಡಾಯ

ಗುರುವಾರ, 11 ನವೆಂಬರ್ 2021 (16:37 IST)
ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಇದೀಗ ಈ ಆದೇಶ ವಿವಾದ ತಂದೊಡ್ಡಿದ್ದು, ರಾಜ್ಯ ಸರ್ಕಾರದ ನಡೆಗೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಈ ಆದೇಶವನ್ನು ಪ್ರಶ್ನೆ ಮಾಡಿ ಸಂಸ್ಕೃತ ಭಾರತೀ ಕರ್ನಾಟಕ ಟ್ರಸ್ಟ್ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದು, ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಮತ್ತೆ ಅಸಮಾಧಾನ ಹೊರ ಹಾಕಿದೆ.ಶಿಕ್ಷಣದಲ್ಲಿ ರಾಜಕೀಯ ಏಕೆ ಬೆರೆಸುತ್ತಿದ್ದೀರಿ. ಇದರಿಂದ ಎಷ್ಟು ವಿದ್ಯಾರ್ಥಿಗಳು ಹೊರಹೋಗಿದ್ದಾರೆ ಗೊತ್ತೇ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ. ಈ ವೇಳೆ ಕನ್ನಡ ಭಾಷೆ ಕಲಿಕೆ ಪ್ರೋತ್ಸಾಹಿಸಲು ಅವಕಾಶವಿದೆ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದಾರೆ. ಮುಂದಿನ ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ