ಒರಾಯನ್ ಮಾಲ್ ತೆರವುಗೊಳಿಸಲು ಕನ್ನಡ ಪರ ಸಂಘಟನೆಗಳ ಪ್ರತಿಭಟನೆ

ಗುರುವಾರ, 18 ಆಗಸ್ಟ್ 2016 (12:29 IST)
ಒರಾಯನ್ ಮಾಲ್ ತೆರವುಗೊಳಿಸಿ ಈ ಜಾಗವನ್ನು ಬಡವರಿಗೆ ನೀಡುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
 
ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿರುವ ಒರಾಯನ್ ಮಾಲ್ ತೆರವುಗೊಳಿಸುವಂತೆ ಆಗ್ರಹಿಸಿ ಕನ್ನಡ ನವ ನಿರ್ಮಾಣ ಸೇನೆ ಅಧ್ಯಕ್ಷ ಯತಿರಾಜ್ ನಾಯ್ಡು ಹಾಗೂ ಕನ್ನಡ ನವ ನಿರ್ಮಾಣ ವೇದಿಕೆ ಅಧ್ಯಕ್ಷ ನರಸಿಂಹಮೂರ್ತಿ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆ ಕೈಗೊಂಡಿವೆ.
 
ರಾಜಕಾಲುವೆ ಒತ್ತುವರಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾನಿರತರು ಆಗ್ರಹಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಬಿಬಿಎಂಪಿ ಅಧಿಕಾರಿಗಳು ಪ್ರಭಾವಿಗಳ ಕಟ್ಟಡಗಳನ್ನು ತೆರುವುಗೊಳಿಸಲು ಹಿಂದೇಟು ಹಾಕುತ್ತಿದ್ದು, ಕೇವಲ ಬಡವರ ಮನೆಗಳನ್ನು ಮಾತ್ರ ತೆರವುಗೊಳಿಸುತ್ತಿದ್ದಾರೆ ಎನ್ನಲಾಗಿದೆ.
 
ನಗರದಲ್ಲಿ ಪ್ರಭಾವಿ ಬಿಲ್ಡರ್‌ಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದು, ಐಟಿ ಕಂಪೆನಿ, ಮಾಲ್‌ಗಳು ಹಾಗೂ ಟೆಕ್ ಪಾರ್ಕ್ ನಿರ್ಮಾಣ ಮಾಡಿಕೊಂಡಿದ್ದಾರೆ. ಬಿಬಿಎಂಪಿ ಹಾಗೂ ಸರಕಾರ ಬಡವರಿಗೊಂದು ನ್ಯಾಯ ಬಲ್ಲಿದವರಿಗೊಂದು ನ್ಯಾಯ ಮಾಡುತ್ತಿದೆ ಎಂದು ಬೆಂಗಳೂರಿನ ಜನತೆ ಆರೋಪಿಸುತ್ತಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ