ಈ ಬಾರಿ ಕನ್ನಡ ರಾಜ್ಯೋತ್ಸವ 1ವಾರ ಆಚರಣೆ
ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಅಕ್ಟೋಬ್ 24 ರಿಂದ 30 ರವರೆಗೆ ಕನ್ನಡಕ್ಕಾಗಿ ನಾವು ಆಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಈ ಬಾರಿ ಒಂದು ವಾರ ನಡೆಯಲಿದ್ದು, ಒಂದು ವಾರ 6 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮವನ್ನು ಅಕ್ಟೋಬರ್ 24 ರಿಂದ 30 ರವರೆಗೆ ನಡೆಸಬೇಕು ಎಂದು ತಿಳಿಸಿದ್ದಾರೆ. ಅದಲ್ಲದೆ ಉದ್ಯೋಗ, ಶಿಕ್ಷಣಕ್ಕಾಗಿ ಬಂದಿರುವ ಹೊರ ರಾಜ್ಯದವರು 100 ಪದ ಕನ್ನಡ ಬಳಸುವಂತೆ ಮನವಿ ಮಾಡಿದ್ದು, ಅಕ್ಟೋಬರ್ 28 ರಂದು ಕನಿಷ್ಟ ಮೂರು ಕನ್ನಡ ಗೀತೆಯನ್ನು ಲಕ್ಷ ಕಂಠಗಳಲ್ಲಿ ಒಂದು ಸಾವಿರ ಕಡೆಗಳಲ್ಲಿ ಸಾಮೂಹಿಕ ಗಾಯ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. ಇನ್ನು ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 4,500 ಅರ್ಜಿ ಸಲ್ಲಿಕೆಯಾಗಿದ್ದು, ಅಕ್ಟೋಬರ್ 28 ಅಥವಾ 29 ರಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.