ಗಡಿ ನಾಡಲ್ಲಿ ಕನ್ನಡ ರಾಜ್ಯೋತ್ಸವ ಸಡಗರ

ಗುರುವಾರ, 29 ನವೆಂಬರ್ 2018 (14:54 IST)
ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಅದ್ಧೂರಿಯಿಂದ ಆಚರಣೆ ಮಾಡಿದರು.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಅದ್ಧೂರಿಯಿಂದ ಆಚರಣೆ ಮಾಡಿದರು.

ಗುಂಡ್ಲುಪೇಟೆಯ ಶಿವಾನಂದ ವೃತ್ತದಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅದ್ದೂರಿಯಾಗಿ ಭುವನೇಶ್ವರಿತಾಯಿಯ ಭಾವಚಿತ್ರವನ್ನ ಮೆರವಣಿಗೆ ಮಾಡಲಾಯಿತು. ಗೂರವರ ಕುಣಿತ, ಕಂಸಾಳೆ, ಕೀಲು ಕುದುರೆ, ಛತ್ರಿಚಾಮರದೂಂದಿಗೆ ವಾಧ್ಯಗೋಷ್ಟಿಯೂ ಮರವಣಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆಯಿತು. ಇದಕ್ಕೂ ಮುನ್ನ ಕರವೇ ಅಧ್ಯಕ್ಷ ಪ್ರವೀಣ್ ಕುಮಾರ್  ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘಟನೆಯ ಸದಸ್ಯರು, ಕನ್ನಡ ಅಭಿಮಾನಿಗಳು ಪಾಲ್ಗೊಂಡಿದ್ದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ