ಕನ್ನಡ ಸಾಹಿತ್ಯ ಸಮ್ಮೇಳನ ಬಾಡೂಕ್ಕೆ ಮನೆಗೊಂದು ಕೋಳಿ, ಕುರಿ ಸಂಗ್ರಹ

Krishnaveni K

ಗುರುವಾರ, 19 ಡಿಸೆಂಬರ್ 2024 (11:02 IST)
ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಾಡೂಟ ಏರ್ಪಡಿಸಲು ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹಿಸಲಾಗುತ್ತಿದೆ.

 ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟಕ್ಕೆ ಬೇಡಿಕೆ ಬಂದರೂ ಈಡೇರಿಸದೇ ಇರುವುದಕ್ಕೆ ಈಗ ವಿರೋಧ ವ್ಯಕ್ತವಾಗಿದೆ. ಈ ಕಾರಣಕ್ಕೆ ಕೆಲವರು ಮಾಂಸಾಹಾರ ಅಭಿಯಾನಕ್ಕೆ ಮುಂದಾಗಿದ್ದಾರೆ. ಅದರ ಭಾಗವಾಗಿ ಕುರಿ, ಕೋಳಿ ಸಂಗ್ರಹ ಮಾಡಲಾಗುತ್ತಿದೆ.

ಸಾಹಿತ್ಯ ಸಮ್ಮೇಳನದಲ್ಲಿ ಜಾರಿಯಾಗಿರುವ ಅಘೋಷಿತ ಮಾಂಸಾಹಾರ ನಿಷೇಧ ವಿರೋಧಿಸಿ ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಳಿ, ಊರಿಗೊಂದು ಕುರಿ ಅಭಿಯಾನ ನಡೆಸಲಾಗುತ್ತಿದೆ. ಈ ಅಭಿಯಾನಕ್ಕೆ ಮೊನ್ನೆಯೇ ಚಾಲನೆ ಸಿಕ್ಕಿದೆ.

ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ಬಡಿಸುವುದೇ ಅಪರಾಧ ಎಂಬಂತೆ ಬಿಂಬಿಸಲಾಗುತ್ತಿದೆ. ಈ ಕಾರಣಕ್ಕೆ ಈ ಅಭಿಯಾನ ಆರಂಭಿಸಲಾಗಿದೆ. ಬಾಡೂಟದ ಬಳಗವನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ. ಮಾಂಸಾಹಾರದ ಅಗ್ರಹ ಎಂದು ತಪ್ಪಾಗಿ ನೋಡಲಾಗುತ್ತಿದೆ ಎಂದು ಸಾಹಿತಿ ರಾಜೇಂದ್ರ ಪ್ರಸಾದ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ