ಕನ್ನಡ ಮಾತನಾಡುವವರು ಇಲ್ಲವಾಗುತ್ತಿದ್ದಾರೆ– ಅನಂತಕುಮಾರ್ ಹೆಗಡೆ

ಶನಿವಾರ, 17 ಫೆಬ್ರವರಿ 2018 (19:42 IST)
ರಾಜ್ಯದ ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಶುದ್ಧ ಕನ್ನಡ ಮಾತನಾಡುವವರೆ ಇಲ್ಲವಾಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿದ್ದಾರೆ.
 
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ಕೌಶಲ್ಯ ಯೋಜನೆ ಅಡಿಯಲ್ಲಿ ಪ್ರಾರಂಭವಾದ ತಾಂತ್ರಿಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶುದ್ಧ ಕನ್ನಡ ಮಾತನಾಡುವ ಯೋಗ್ಯತೆ ಇಲ್ಲವಾಗುತ್ತಿದೆ ಎಂದಿದ್ದಾರೆ.
 
ಬೆಂಗಳೂರಿನ ಪರಿಸ್ಥಿತಿಯಂತೂ ಹೇಳುವ ಅಗತ್ಯವಿಲ್ಲ ಎಂದ ಅವರು, ಭಾಷಾ ಶುದ್ಧತೆ ಇಲ್ಲದವರಿಗೆ ಕನ್ನಡ ಮಾತನಾಡುವ ಯೋಗ್ಯತೆ ಇಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ