ಪ್ರತಿಭಟನೆಯಲ್ಲಿ ಕರಂದ್ಲಾಜೆಗೆ ಗಾಯ: ಪೊಲೀಸರ ವಿರುದ್ಧ ವಾಗ್ದಾಳಿ

ಮಂಗಳವಾರ, 5 ಸೆಪ್ಟಂಬರ್ 2017 (13:56 IST)
ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಪೊಲೀಸರು ಅತ್ಯಂತ ನಿರ್ದಯವಾಗಿ ನಡೆದುಕೊಂಡಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಫ್ರೀಡಂಪಾರ್ಕ್‌ನಲ್ಲಿ ಮಂಗಳೂರು ಚಲೋ ಕಾರ್ಯಕ್ರಮಕ್ಕಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಅವರು, ಪೊಲೀಸರು ನಮ್ಮನ್ನು ಹಿಡಿದು ಎಳೆದಾಡಿದ್ದಾರೆ. ಕಾಲಿಗೆ ನೋವಿದೆ ಮುಟ್ಟಬೇಡ ಎಂದರೂ ಪೊಲೀಸರ ನೂಕಾಟ ತಳ್ಳಾಟದಲ್ಲಿ ಚರ್ಮ ಕಿತ್ತುಬಂದಿದೆ ಎಂದು ತಿಳಿಸಿದ್ದಾರೆ.
 
ಎರಡು ತಿಂಗಳ ಹಿಂದೆ ಕಾಲಿಗೆ ಶಸ್ತ್ರಚಿಕಿತ್ಸೆಯಾಗಿತ್ತು. ಇದೀಗ ಮತ್ತೆ ಅದೇ ಕಾಲಿಗೆ ಗಾಯವಾಗಿದೆ. ಪೊಲೀಸ್ ಅಧಿಕಾರಿ ಕ್ಯಾತಾಯಿನಿ ನನ್ನನ್ನು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ ಎಂದರು.
 
ನಮ್ಮ ಜೊತೆ ಪೊಲೀಸರು ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಶಾಂತಿಯುತ ಹೋರಾಟವನ್ನು ತಡೆಯಲು ಸರಕಾರ ಯತ್ನಿಸುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ.
 
ರಾಜ್ಯದ ಇತರ ಜಿಲ್ಲೆಗಳಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ಮಂಗಳೂರಿಗೆ ತೆರಳುತ್ತಿದ್ದು, ಯಾವ ಶಕ್ತಿಯೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದು ಗುಡುಗಿದರು.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದು, ಪಕ್ಷದ ಮುಖಂಡರಿಗೆ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ