ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ಖಂಡಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ
ಗುರುವಾರ, 31 ಆಗಸ್ಟ್ 2017 (14:02 IST)
ಬೆಳಗಾವಿ: ಕೆಪಿಸಿಸಿ ಮಹಿಳಾ ರಾಜ್ಯ ಘಟಕ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ಕನ್ನಡ ವಿರೋಧಿ ಹೇಳಿಕೆ ಖಂಡಿಸಿ ಕರವೇ ನಾರಾಯಣಗೌಡ ಬಣ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಸಂಗೋಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಗಡಿನಾಡು ಬೆಳಗಾವಿ ಹಾಗೂ ಮಹಾರಾಷ್ಟ್ರದ ಗಡಿ ವಿಷಯ ದಾವೆ ನ್ಯಾಯಾಲಯದಲ್ಲಿದೆ. ಆದರೆ ಇತ್ತೀಚೆಗೆ ಬಸರಿಕಟ್ಟೆ ಗಣೇಶೋತ್ಸವ ಸಮಾರಂಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ಸುಪ್ರೀಂ ಕೋರ್ಟ್ ನಲ್ಲಿ ಮಹಾರಾಷ್ಟ್ರದ ಪರವಾಗಿ ತೀರ್ಪು ಬಂದರೆ ಜೈ ಮಹಾರಾಷ್ಟ್ರ ಎಂದು ಘೋಷಣೆ ಹಾಕುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ರಾಜ್ಯದ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ನಾಡವಿರೋಧಿ ನೀತಿ ಅನುಸರಿಸಿದ ಹೆಬ್ಬಾಳ್ಕರ್ ರನ್ನು ಕೂಡಲೇ ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ಇಲ್ಲಾದಲ್ಲಿ ಕೆಪಿಸಿಸಿಯಿಂದ ಹೆಬ್ಬಾಳಕರ್ ರನ್ನು ವಜಾ ಮಾಡಿ, ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.