ಕಾರ್ಕಳ ರೇಪ್ ಪ್ರಕರಣಕ್ಕೆ ಟ್ವಿಸ್ಟ್: ಬಿಜೆಪಿ ಕಾರ್ಯಕರ್ತನೇ ಶಾಮೀಲು
ಅದರಲ್ಲೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ಆಪ್ತವಲಯದಲ್ಲಿದ್ದ ಬಿಜೆಪಿ ಕಾರ್ಯಕರ್ತ ಅಭಯ್ ಕೂಡಾ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಈತ ಸುನಿಲ್ ಕುಮಾರ್ ಅಭಿಮಾನಿ, ಬಿಜೆಪಿ ಮತ್ತು ಬಜರಂಗದಳ ಕಾರ್ಯಕರ್ತ ಎಂದು ತಿಳಿದುಬಂದಿದೆ.
ಘಟನೆ ನಡೆದ ಸಂದರ್ಭದಲ್ಲಿ ಶಾಸಕ ವಿ ಸುನಿಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಈಗ ತಮ್ಮ ಆಪ್ತನೇ ಪ್ರಕರಣದಲ್ಲಿ ಭಾಗಿಯಾಗಿರುವುದು ಅವರಿಗೆ ತೀವ್ರ ಮುಜುಗರವುಂಟು ಮಾಡಿದೆ. ಇದೀಗ ಆರೋಪಿ ಅಭಯ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಅಲ್ತಾಫ್ ಗೆ ಡ್ರಗ್ಸ್ ತಂದುಕೊಟ್ಟಿದ್ದ ಮತ್ತು ಕೃತ್ಯದ ಬಳಿಕ ತಪ್ಪಿಸಿಕೊಳ್ಳಲು ಇದೇ ಅಭಯ್ ಸಹಾಯ ಮಾಡಿದ್ದ ಎನ್ನಲಾಗಿದೆ. ಈತನನ್ನು ಕಾರ್ಕಳ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಬಿಜೆಪಿಗೆ ತೀವ್ರ ಮುಜುಗರ ತಂದಿದೆ ಎನ್ನಬಹುದು.