ಕಾರ್ಕಳ: ನಕಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿ ಅರೆಸ್ಟ್‌

Sampriya

ಸೋಮವಾರ, 11 ನವೆಂಬರ್ 2024 (15:54 IST)
Photo Courtesy X
ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್ ಅವರನ್ನು ಕಾರ್ಕಳ ಪೊಲೀಸರು ಪುದುಚೇರಿಯ ಮಾಹೆಯಲ್ಲಿ ಬಂಧಿಸಿದ್ದಾರೆ.

ಬಾರೀ ಚರ್ಚೆಗೆ ಕಾರಣವಾಗಿದ್ದ ಕಾರ್ಕಳ ಪರಶುರಾಮ ಥೀಮ್ ಪಾರ್ಕ್‌ ಅವ್ಯವಹಾರ ಸಂಬಂಧ ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ನಲ್ಲೂರಿನ ಕೃಷ್ಣ ಶೆಟ್ಟಿ ಎಂಬುವರು ದೂರು ನೀಡದ್ದರು.

ಆರೋಪಿ ಕೃಷ್ಣ ನಾಯ್ಕ್ ಕಾರ್ಕಳ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದರು. ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಕ್ರಿಶ್ ಆರ್ಟ್ ವರ್ಲ್ಡ್‌ನ ಕೃಷ್ಣ ನಾಯ್ಕ್‌ಗೆ ಮೂರ್ತಿ ನಿರ್ಮಾಣದ ಹೊಣೆ ಹೊರಿಸಲಾಗಿತ್ತು. ಆದರೆ ಶಿಲ್ಪಿ ಕೃಷ್ಣ ನಾಯಕ್ ಅವರು ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ಆರೋಪ ಕೇಳಿಬಂದಿತ್ತು.

ಉಡುಪಿ ನ್ಯಾಯಾಲಯ ಕೃಷ್ಣ ನಾಯಕ್ ಅವರ ಜಾಮೀನು ತಿರಸ್ಕರಿಸಿತ್ತು. ಜಾಮೀನು ತಿರಸ್ಕಾರ ಬೆನ್ನಲ್ಲೇ ಕೃಷ್ಣ ನಾಯಕ್ ತಲೆಮರೆಸಿಕೊಂಡಿದ್ದರು. ಇದೀಗ, ಕಾರ್ಕಳ ಠಾಣೆ ಪೊಲೀಸರು ಶಿಲ್ಪಿ ಕೃಷ್ಣ ನಾಯಕ್ ಅವರನ್ನು ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ