ಕರ್ನಾಟಕ ಹವಾಮಾನ: ಬೆಂಗಳೂರಿನಲ್ಲಿ ಈ ದಿನದಿಂದ ಮತ್ತೆ ಮಳೆ

Krishnaveni K

ಭಾನುವಾರ, 15 ಡಿಸೆಂಬರ್ 2024 (11:14 IST)
ಬೆಂಗಳೂರು: ಕರ್ನಾಟಕದಲ್ಲಿ ಸೈಕ್ಲೋನ್ ಮಳೆ ನಿಂತಿದ್ದು, ಚಳಿಯ ವಾತಾವರಣ ಶುರುವಾಗಿದೆ. ವಿಶೇಷವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೆವ ಚಳಿಯಿದೆ. ಹವಾಮಾನ ವರದಿ ಪ್ರಕಾರ ಈ ದಿನದಿಂದ ಮತ್ತೆ ಬೆಂಗಳೂರಿನಲ್ಲಿ ಮಳೆ ಶುರುವಾಗಲಿದೆ.

ಅಕಾಲಿಕ ಮಳೆಯಿಂದಾಗಿ ಬೆಂಗಳೂರಿನ ಜನ ಸಂಕಷ್ಟಕ್ಕೀಡಾಗಿದ್ದಾರೆ. ಕಳೆದ ವಾರವಿಡೀ ಸುರಿದಿದ್ದ ಮಳೆ ಈ ವಾರ ಮತ್ತೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಡಿಸೆಂಬರ್ 19 ರಿಂದ ಮತ್ತೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಮೊನ್ನೆಯಷ್ಟೇ ಎರಡು ದಿನ ನಿರಂತರವಾಗಿ ಸುರಿದಿದ್ದ ಮಳೆಗೆ ಈಗ ಬ್ರೇಕ್ ಬಿದ್ದಿದೆ. ಮಳೆ ನಿಂತ ಬೆನ್ನಲ್ಲೇ ಕೊರೆವ ಚಳಿ ಶುರುವಾಗಿದೆ. ಬೆಂಗಳೂರಿನಲ್ಲಿ ಈಗ ಗರಿಷ್ಠ ಉಷ್ಣಾಂಶ 24 ಡಿಗ್ರಿಯಷ್ಟಿದ್ದರೆ ಕನಿಷ್ಠ 18 ಡಿಗ್ರಿಯಷ್ಟಿದೆ. ಇನ್ನು ಐದು ದಿನಗಳ ಬಳಿಕ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರು ನಗರ, ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಶಿವಮೊಗ್ಗ, ರಾಮನಗರ, ಹಾವೇರಿ, ಉತ್ತರ ಕನ್ನಡ, ಕೊಪ್ಪಳ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಡಿಸೆಂಬರ್ 19 ರಿಂದ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ