ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ವಿಶೇಷ ಆಫರ್ ನೀಡಲಾಗಿದೆ.
ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಒಟ್ಟು 1171 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆ ನಡೆಯುವ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮರಾ ಆಳವಡಿಸಲಾಗಿದೆ. ಪರೀಕ್ಷಾ ಕೊಠಡಿಯೊಳಗೆ ಮೊಬೈಲ್, ಇತರೆ ಎಲೆಕ್ಟ್ರಾನಿಕ್ ಗೆಜೆಟ್ ಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಸ್ಥಳಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿ, ಧ್ವನಿ ವರ್ಧಕಗಳನ್ನು ನಿಷೇಧಿಸಲಾಗಿದೆ.
ವಿದ್ಯಾರ್ಥಿಗಳಿಗೆ ವಿಶೇಷ ಆಫರ್
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿಶೇಷ ಆಫರ್ ನೀಡಿದೆ. ವಿದ್ಯಾರ್ಥಿಗಳಿಗೆ ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.