ಕಾವೇರಿ ನಿರ್ವಹಣಾ ಮಂಡಳಿಗೆ ಕನ್ನಡಿಗರ ವಿರೋಧ: ಟಿ.ಎ.ನಾರಾಯಣಗೌಡ

ಶುಕ್ರವಾರ, 30 ಸೆಪ್ಟಂಬರ್ 2016 (17:26 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದ್ರೆ ರಾಜ್ಯಕ್ಕೆ ಅನ್ಯಾಯವಾಗುತ್ತದೆ. ಯಾವುದೇ ಕಾರಣಕ್ಕೂ ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗಬಾರದು. ಮಂಡಳಿ ರಚನೆಯಾಗದಂತೆ ರಾಜ್ಯದ ಬಿಜೆಪಿ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದ್ದಾರೆ.
 
ಕಾವೇರಿ ನದಿಯಿಂದ ತಮಿಳುನಾಡಿಗೆ ಅಕ್ಟೋಬರ್ 1 ರಿಂದ 6 ರವರೆಗೂ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಸುಪೀಂಕೋರ್ಟ್ ಆದೇಶ ನೀಡಿದೆ. ಆದರೆ, ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಏನೇ ಆದರೂ ನಾವು ರಾಜ್ಯ ಸರಕಾರದ ಜೊತೆ ಇರುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಭರವಸೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ