ಬೆಂಗಳೂರು: ಈಗಾಗಲೇ ಉತ್ತರ ಪ್ರದೇಶ, ಮಧ್ಯಪ್ರದೇಶ ರಾಜ್ಯಗಳಲ್ಲಿ ಜಾರಿಗೆ ಬಂದಿರುವ ಲವ್ ಜಿಹಾದ್ ಕಾಯ್ದೆ ರಾಜ್ಯದಲ್ಲೂ ಜಾರಿಗೆ ಬರುವುದು ನಿಶ್ಚಿತವಾಗಿದೆ.
ಮದುವೆಗಾಗಿ ಬಲವಂತದ ಮತಾಂತರ ನಿಷೇಧಿಸುವ ಈ ಕಾಯ್ದೆ ಈಗಾಗಲೇ ಬಿಜೆಪಿ ಆಡಳಿತವಿರುವ ಎರಡು ರಾಜ್ಯಗಳಲ್ಲಿ ಜಾರಿಗೆ ಬಂದಿದೆ. ಗುಜರಾತ್ ನಲ್ಲಿ ಸದ್ಯದಲ್ಲೇ ಜಾರಿಗೆ ಬರಲಿದೆ. ಇದೀಗ ರಾಜ್ಯದಲ್ಲೂ ಇಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲಾಗುವುದು ಎಂದು ಅಲ್ಪ ಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ.
ಸದ್ಯಕ್ಕೆ ಇದು ಕಾನೂನು ಇಲಾಖೆಯ ಪರಿಶೀಲನೆಯಲ್ಲಿದ್ದು, ವಿವಿಧ ತಜ್ಞರು, ಸಮಾಜದ ಮುಖಂಡರೊಂದಿಗೆ ಚರ್ಚಿಸಿ ಕಾಯ್ದೆ ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.