AICC ನಾಯಕರಿಗೆ ಕರ್ನಾಟಕ ಎಟಿಎಂ: ಬಿ.ಎಸ್.ಯಡಿಯೂರಪ್ಪ
ಎಐಸಿಸಿ ನಾಯಕರಿಗೆ ಕರ್ನಾಟಕ ಎಟಿಎಂ ಆಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಕರ್ನಾಟಕಕ್ಕೆ ಭೇಟಿ ನೀಡುವುದೇ ಕಲೆಕ್ಷನ್ ಟಾರ್ಗೆಟ್ ನೀಡಲು ಎಂಬುದು ರಾಜ್ಯದ ಜನತೆಗೆ ಮನವರಿಕೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ಯಡಿಯೂರಪ್ಪ ತಮ್ಮ ಪಕ್ಷದ ಕಛೇರಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.