Karnataka Bandh: ಮಾರ್ಚ್ 22 ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ ಇಲ್ಲಿದೆ ವಿವರ

Krishnaveni K

ಮಂಗಳವಾರ, 18 ಮಾರ್ಚ್ 2025 (16:42 IST)
Photo Credit: X
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಈ ದಿನ ಏನಿರುತ್ತೆ, ಏನಿರಲ್ಲ ಇಲ್ಲಿದೆ ವಿವರ.

ಕರ್ನಾಟಕದಲ್ಲಿ ಎಂಇಎಸ್ ನಿಷೇಧ ಮಾಡಬೇಕು, ಮರಾಠಿಗರ ದಬ್ಬಾಳಿಕೆ ನಿಲ್ಲಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಮಾರ್ಚ್ 22 ರಂದು ಬಂದ್ ಗೆ ಕರೆ ನೀಡಿವೆ.

ಈ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ಜಾರಿಯಲ್ಲಿರಲಿದೆ. ಬೆಳಿಗ್ಗೆ 10.30 ರಿಂದ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆಯಿರುತ್ತದೆ. ಬೆಳಗಾವಿಯಿಂದ ಎಂಇಎಸ್ ಒದ್ದು ಓಡಿಸಬೇಕು ಎಂದರೆ ಕರ್ನಾಟಕ ಬಂದ್ ಗೆ ಬೆಂಬಲ ನೀಡಿ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

ಈ ದಿನ ಬಸ್ ಓಡಿಸಬಾರದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಗೆ ಮನವಿ ಮಾಡಿದ್ದೇವೆ. ಇನ್ನೊಮ್ಮೆ ಮನವಿ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಅಂದು ಖಾಸಗಿ ವಾಹನವನ್ನೂ ಬಳಸದಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಇನ್ನು ಆಟೋ ಚಾಲಕರೂ ಬೆಂಬಲ ನೀಡುವ ನಿರೀಕ್ಷೆಯಿದ್ದು ಅಂದು ಆಟೋ ಓಡಾಟವೂ ಇರಲ್ಲ. ಇನ್ನು ಕನ್ನಡ ಸಿನಿಮಾ ರಂಗವೂ ಬೆಂಬಲ ನೀಡಲಿದ್ದು, ಚಿತ್ರೀಕರಣ, ಸಿನಿಮಾ ಪ್ರದರ್ಶನ ರದ್ದಾಗಲಿದೆ. ಬಸ್ ಸಂಚಾರ ಮತ್ತು ಹೋಟೆಲ್ ತೆರೆಯುವ ಬಗ್ಗೆ ಇನ್ನಷ್ಟೇ ಅಧಿಕೃತ ಪ್ರಕಟಣೆ ಹೊರಬರಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ