ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬೆಳಿಗ್ಗೆ ಕುಮಾರಕೃಪಾ ವಸತಿ ಗೃಹದಿಂದ ಕಾಲ್ನಡಿಗೆ ಮೂಲಕ ಹೊರಟು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಲಾಗಿತ್ತು. ಅದರಂತೆ, ಶಾಸಕರು, ಮೇಲ್ಮನೆ ಸದಸ್ಯರು ಮತ್ತು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿದ್ದರು. ವಿಜಯೇಂದ್ರ, ಆರ್.ಅಶೋಕ್ ಅವರ ನೇತೃತ್ವದಲ್ಲಿ ಶಾಸಕರು ಹೊರಬರುತ್ತಿದ್ದಂತೆ ತಡೆದ ಪೊಲೀಸರು ಎಲ್ಲರನ್ನೂ ಬಂಧಿಸಿದರು.
ಮೋಸ, ಅನ್ಯಾಯ ಅನ್ಯಾಯ ಎಂದು ಕೂಗಿದ ಆರ್.ಅಶೋಕ್ ಅವರು, ಈ ಸರಕಾರದ ದೌರ್ಜನ್ಯವನ್ನು ಖಂಡಿಸುತ್ತೇನೆ; ವಿಪಕ್ಷ ನಾಯಕನಾಗಿ ಪ್ರತಿಭಟನೆಗೆ ಅವಕಾಶ ಕೊಡುತ್ತಿಲ್ಲ ಎಂದು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದರು.