ಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

Krishnaveni K

ಶುಕ್ರವಾರ, 20 ಡಿಸೆಂಬರ್ 2024 (14:41 IST)
ಬೆಂಗಳೂರು: ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ಬಂಧನವನ್ನು ಖಂಡಿಸಿ ಇಂದು ಇಲ್ಲಿನ “ಫ್ರೀಡಂ ಪಾರ್ಕ್”ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. 
 
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಮಾತನಾಡಿ ಬಂಧನ ಕ್ರಮವನ್ನು ಆಕ್ಷೇಪಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಶ್ಲೀಲ ಪದ ಬಳಸಿದ್ದಾರೆಂಬ ಆರೋಪದಲ್ಲಿ ಸಿಟಿ ರವಿಯವರನ್ನು ನಿನ್ನೆ ರಾತ್ರಿ ಬಂಧಿಸಲಾಗಿತ್ತು. ಇಂದು ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದೆ. ನಿನ್ನೆ ರಾತ್ರಿ ಬಂಧನದ ಬಳಿಕ ಹೈಡ್ರಾಮಾವೇ ನಡೆದಿದೆ. ಜೊತೆಗೆ ಸಿಟಿ ರವಿ ತಲೆಗೂ ಗಾಯವಾಗಿತ್ತು. ಈ ಬಗ್ಗೆ ಇಂದು ಅವರು ಕೋರ್ಟ್ ನಲ್ಲಿ ದೂರಿದ್ದಾರೆ. ನನ್ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದಿದ್ದಾರೆ. ಇದನ್ನು ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸಿದೆ. ಇದೀಗ ಪ್ರಕರಣವನ್ನು ಬೆಂಗಳೂರಿನ ಕೋರ್ಟ್ ಗೆ ವರ್ಗಾಯಿಸಲಾಗಿದೆ.
 
ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಭೈರತಿ ಬಸವರಾಜ್, ಶಾಸಕ ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಹರೀಶ್ ಪೂಂಜಾ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ