ಬಜೆಟ್ ಅಧಿವೇಶನ ಯಾವಾಗ, ಬಜೆಟ್ ಮಂಡನೆ ಯಾವಾಗ ದಿನಾಂಕ ಘೋಷಣೆ
ಈಗಾಗಲೇ ಕೇಂದ್ರ ಬಜೆಟ್ ಮಂಡನೆಯಾಗಿದ್ದು ರಾಜ್ಯ ಬಜೆಟ್ ಮಂಡನೆ ಯಾವಾಗ ಎಂದು ಜನ ಎದಿರು ನೋಡುತ್ತಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಮಂಡನೆ ದಿನಾಂಕ ಘೋಷಣೆ ಮಾಡಿದ್ದಾರೆ.
ಮಾರ್ಚ್ 3 ರಿಂದ ಕರ್ನಾಟಕ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಮಾರ್ಚ್ 7 ರಂದು ರಾಜ್ಯದ ಈ ಆರ್ಥಿಕ ವರ್ಷದ ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಇಂದು ಘೋಷಣೆ ಮಾಡಿದ್ದಾರೆ. ಈ ಅಧಿವೇಶನದಲ್ಲಿ ಹಲವು ಮುಖ್ಯ ವಿಚಾರಗಳು ಚರ್ಚೆಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.
ಬಜೆಟ್ ಮಂಡಿಸುವ ಸಲುವಾಗಿ ಈಗಾಗಲೇ ಸಿಎಂ ವಿವಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಡುವುದರ ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಹಣ ಹೊಂದಿಸುವುದು ಸರ್ಕಾರಕ್ಕೆ ಸವಾಲಾಗಿದೆ. ಇದನ್ನು ಹೇಗೆ ನಿಭಾಯಿಸುತ್ತಾರೆ ನೋಡಬೇಕಿದೆ.