Karnataka Budget live: ಎಸ್ ಸಿ, ಎಸ್ ಟಿಯವರಿಗೆ ನಿಜಕ್ಕೂ ದೊಡ್ಡ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ

Krishnaveni K

ಶುಕ್ರವಾರ, 7 ಮಾರ್ಚ್ 2025 (11:14 IST)
ಬೆಂಗಳೂರು: ಕರ್ನಾಟಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನಿಜಕ್ಕೂ ಲಾಭದಾಯಕವಾಗುವಂತಹ ಕೊಡುಗೆಯೊಂದನ್ನು ನೀಡಿದ್ದಾರೆ.

ಈ ಬಜೆಟ್ ನಲ್ಲಿ ಕೃಷಿ, ಮೂಲಸೌಕರ್ಯಾಭಿವೃದ್ಧಿಗೆ  ಸಿಎಂ ಹೆಚ್ಚಿನ ಒತ್ತು ನೀಡಿದ್ದಾರೆ. ಜೊತೆಗೆ ಎಸ್ ಸಿ/ ಎಸ್ ಟಿ ಸಮುದಾಯದವರ ಅನುದಾನ ಕಿತ್ತುಕೊಳ್ಳಲಾಗಿದೆ ಎಂಬ ಆರೋಪದಿಂದ ಪಕ್ಷಕ್ಕೆ ಹಿನ್ನಡೆಯಾಗದಂತೆ ಎಚ್ಚರಿಕೆ ನಡೆಯೊಂದನ್ನು ಇಟ್ಟಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ.

ಇನ್ನು ಮುಂದೆ ಸರ್ಕಾರೀ ಕಾಮಗಾರಿಗಳ ಗುತ್ತಿಗೆಯಲ್ಲಿ ಎಸ್ ಸಿ/ಎಸ್ ಟಿ ಸಮುದಾಯದವರಿಗೆ ಮೀಸಲಾತಿ ನೀಡುವ ಘೋಷಣೆ ಮಾಡಿದ್ದಾರೆ. 2 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಈ ಮೀಸಲಾತಿ ಜಾರಿಗೆ ಬರಲಿದೆ.

ಇದುವರೆಗೆ ಮುಸ್ಲಿಂ ಸಮುದಾಯದವರಿಗೆ ಶೇ.4 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿತ್ತು. ಆದರೆ ಇದಕ್ಕೆ ವಿಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ನೀಡುವ ಘೋಷಣೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ