ದೆಹಲಿ ಚುನಾವಣೆ ಖರ್ಚಿಗೆ ಕರ್ನಾಟಕದಲ್ಲಿ ಬಸ್ ದರ ಏರಿಕೆ ಮಾಡಲಾಗಿದೆಯಾ

Krishnaveni K

ಶನಿವಾರ, 4 ಜನವರಿ 2025 (14:23 IST)
Photo Credit: X
ಬೆಂಗಳೂರು: ದೆಹಲಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಖರ್ಚು ವೆಚ್ಚ ನಿಭಾಯಿಸಲು ರಾಜ್ಯದಲ್ಲಿ ಬಸ್ ದರ ಏರಿಕೆ ಮಾಡಿ ಜನರಿಗೆ ಬರೆ ಹಾಕಲಾಗಿದೆಯೇ? ಹೀಗೆಂದು ಕರ್ನಾಟಕ ಬಿಜೆಪಿ ಆರೋಪಿಸಿದೆ.

ರಾಜ್ಯದಲ್ಲಿ ಇತ್ತೀಚೆಗೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15 ರಷ್ಟು ಹೆಚ್ಚು ಮಾಡಿತ್ತು. ಇದರ ಬಗ್ಗೆ ವಿಪಕ್ಷ ಬಿಜೆಪಿ ಮತ್ತು ಸಾರ್ವಜನಿಕರಿಂದ ಭಾರೀ ಆಕ್ರೋಶ ಕೇಳಿಬಂದಿದೆ.

ಈ ನಡುವೆ ಬಿಜೆಪಿ ಘಟಕ ಬಸ್ ದರ ಏರಿಕೆ ಬಗ್ಗೆ ಕಾಂಗ್ರೆಸ್ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. ಪರ ರಾಜ್ಯಗಳ ಚುನಾವಣೆ ಖರ್ಚಿಗಾಗಿ ಕನ್ನಡಿಗರ ಜೇಬಿಗೆ ಕನ್ನ ಹಾಕುವ ಸಂಪ್ರದಾಯವನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ ಮುಂದುವರಿಸಿದೆ. ಸಾರಿಗೆ ಸಂಸ್ಥೆ ಲಾಭದಲ್ಲಿದೆ ಎಂದು ಸುಳ್ಳು ಹೇಳಿ ಈಗ ಏಕಾಏಕಿ ಬಸ್ ಪ್ರಯಾಣ ದರವನ್ನು ಶೇ.15 ರಷ್ಟು ಹೆಚ್ಚಿಸಿರುವುದು ಸಹ ಮುಂಬರುವ ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ನ ಪಾರ್ಟಿ ಫಂಡ್ ಗೆ.

ಸಿಎಂ ಸಿದ್ದರಾಮಯ್ಯನವರೇ ಡಿಸಿಎಂ ಡಿಕೆ ಶಿವಕುಮಾರ್ ಅವರೇ ನಿಮ್ಮ ಸ್ವಾರ್ಥಕ್ಕಾಗಿ ಕನ್ನಡಿಗರಿಗೆ ಇನ್ನೆಷ್ಟು ತೊಂದರೆ ನೀಡುವಿರಿ? ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ದೆಹಲಿ ಚುನಾವಣೆಗೆ ಕನ್ನಡಿಗರ ಜೇಬಿಗೆ ಕತ್ತರಿ ಹಾಕಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ