ಹೊಸ ವರ್ಷಕ್ಕೆ ರಾಜ್ಯ ಸರ್ಕಾರದಿಂದ ಬಸ್ ಪ್ರಯಾಣಿಕರಿಗೆ ಕಹಿ ಸುದ್ದಿ, ಪುರುಷರ ಜೇಬಿಗೆ ಬೀಳಲಿದೆ ಕತ್ತರಿ

Sampriya

ಗುರುವಾರ, 2 ಜನವರಿ 2025 (17:39 IST)
Photo Courtesy X
ಬೆಂಗಳೂರು: ಹೊಸ ವರ್ಷರಂಭದ ಬೆನ್ನಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದೆ.   ಕರ್ನಾಟಕ ಸಾರಿಗೆ ನಿಗಮಗಳ ಬಸ್ ಪ್ರಯಾಣ ಟಿಕೆಟ್ ದರವನ್ನು ಶೇ.15ರಷ್ಟು ಏರಿಕೆ ಮಾಡುವ ನಿರ್ಧಾರಕ್ಕೆ ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದ.  

ನಾಲ್ಕು ನಿಗಮಗಳಿಂದ ಬಸ್ ಪ್ರಯಾಣ ದರ ಏರಿಕೆಯ ಕುರಿತು ಪ್ರಸ್ತಾವನೆಗಳು ಬರಲಿದೆ.

ಬಿಎಂಟಿಸಿ ಬಸ್ ದರ ಏರಿಕೆಯಾಗಿ 10ವರ್ಷ ಆಗಿದ್ದರೆ ಕೆಎಸ್‌ಆರ್‌ಟಿಸಿ ದರ ಏರಿಕೆಯಾಗಿ 5 ವರ್ಷದಾಗಿದೆ. ಹೀಗಾಗಿ ಇಂದಿನ ಕ್ಯಾಬಿನೆಟ್ ಸಭೆಯ ಬಳಿಕ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದರ ಏರಿಕೆಯ ಪ್ರಮಾಣದ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ.


ಈ ಮೂಲಕ ರಾಜ್ಯ ಸರ್ಕಾರ ಪುರುಷರ ಜೇಬಿಗೆ ಕತ್ತರಿ ಹಾಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ