ಬೆಂಗಳೂರು: ಎರಡನೇ ಹಂತದ ನಾಮಪತ್ರ ಸಲ್ಲಿಕೆ ಕಾರ್ಯ ಇಂದು ಆರಂಭವಾಗಲಿದ್ದು, ಕರ್ನಾಟಕದ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಘಟಾನುಘಟಿ ನಾಯಕರಿಗೆ ಆಯಾ ಪಕ್ಷದ ನಾಯಕರು ಸಾಥ್ ನೀಡಲಿದ್ದಾರೆ. ನಾಮಪತ್ರ ಸಲ್ಲಿಕೆ ಎನ್ನುವುದು ಎಲ್ಲಾ ಪಕ್ಷಗಳಿಗೆ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿಕ್ಕಂತಾಗುತ್ತದೆ. ಹೀಗಾಗಿ ಎಲ್ಲಾ ಪಕ್ಷದ ನಾಯಕರೂ ಭರ್ಜರಿ ರೋಡ್ ಶೋ ಮೂಲಕವೇ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಕೆಎಸ್ ಈಶ್ವರಪ್ಪ ಇಂದು ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಈಶ್ವರಪ್ಪಗೆ ಹಿಂದೂ ಸಂಘಟನೆಗಳು, ಸಮುದಾಯದ ನಾಯಕರು ಸಾಥ್ ನೀಡಲಿದ್ದಾರೆ. ಇನ್ನು, ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳು ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಬಿಜೆಪಿಯಿಂದ ಬಿ.ಶ್ರೀರಾಮುಲು ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅವರಿಗೆ ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ. ಕಾಂಗ್ರೆಸ್ ನಿಂದ ಇ. ತುಕರಾಂ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಅವರಿಗೆ ಡಿಕೆ ಶಿವಕುಮಾರ್ ಸಾಥ್ ನೀಡಲಿದ್ದಾರೆ.