Karnataka CET Exam: ಸಿಇಟಿ ಪರೀಕ್ಷೆ ಯಾವಾಗ, ದಿನಾಂಕ, ನಿಯಮಗಳ ಕುರಿತ ಸಂಪೂರ್ಣ ವಿವರ ಇಲ್ಲಿದೆ

Krishnaveni K

ಗುರುವಾರ, 10 ಏಪ್ರಿಲ್ 2025 (12:16 IST)
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಬಂದಿದ್ದು ಈಗ ಸಿಇಟಿ ಪರೀಕ್ಷೆ ಕಾಲ. ಸಿಇಟಿ ಪರೀಕ್ಷೆ ಯಾವಾಗ ಯಾವ ದಿನ ಯಾವೆಲ್ಲಾ ಪರೀಕ್ಷೆ ಸಂಪೂರ್ಣ ವಿವರ ಇಲ್ಲಿದೆ ನೋಡಿ.

ಈ ಸಾಲಿನ ಸಿಇಟಿ ಪರೀಕ್ಷೆಗಳು ಏಪ್ರಿಲ್ 16 ಮತ್ತು 17 ರಂದು ನಡೆಯಲಿದೆ. ಏಪ್ರಿಲ್ 16 ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತ ಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನ ಶಾಸ್ತ್ರ ಮತ್ತು ಏಪ್ರಿಲ್ 17 ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಗಣಿತ ಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮುಂಚಿತವಾಗಿ ಮತ್ತು ಪರೀಕ್ಷಾ ನಂತರ 30 ನಿಮಿಷ ಪೊಲೀಸರು ಬಿಗಿ ಭದ್ರತೆ ಒದಗಿಸಲಿದ್ದಾರೆ. ವಿಜ್ಞಾನ ವಿಷಯ ಬೋಧಿಸುವ ಶಿಕ್ಷಕರ ಮಕ್ಕಳು ಪರೀಕ್ಷೆ ಬರೆಯುತ್ತಿದ್ದರೆ ಅಂತಹವರ ಮಕ್ಕಳು ಪರೀಕ್ಷೆಯ ಯಾವುದೇ ಕೆಲಸಕ್ಕೆ ನಿಯೋಜಿಸುವಂತಿಲ್ಲ.

ವಿದ್ಯಾರ್ಥಿಗಳು ಮೊಬೈಲ್, ಕೈ ಗಡಿಯಾರ ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಸಿಬ್ಬಂದಿಗಳಿಗೂ ಇದನ್ನು ನಿಷೇಧಿಸಲಾಗಿದೆ. ಮುಖ್ಯ ಅಧೀಕ್ಷಕರು ಮಾತ್ರ ಬೇಸಿಕ್ ಸೆಟ್ ಮೊಬೈಲ್ ಬಳಸಬಹುದಾಗಿದೆ. ಎಲ್ಲಾ ಕೊಠಡಿಗಳಿಗೆ ಸಿಸಿಟಿವಿ ನಿಗಾ ಇರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ