ರಾಜಧಾನಿ ಬೆಂಗಳೂರು ಮಹಾಮಳೆಗೆ ತತ್ತರಿಸಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ರು. ಸಿಎಂ ಬಸವರಾಜ್ ಬೊಮ್ಮಾಯಿ ಬಿಎಂಟಿಸಿ ಬಸ್ ನಲ್ಲಿ ಎರಡನೇ ದಿನ ಸಿಟಿ ರೌಂಡ್ಸ್ ಆರಂಭಿಸಿದ್ರು.
ಜೆ.ಸಿ.ನಗರ, ಕಮಲಾನಗರ, ನಾಗವಾರ, ಹೆಚ್‌ಎಸ್‌ಆರ್ ಲೇಔಟ್ ಸೇರಿದಂತೆ ಮಳೆಯಿಂದ ಸಂಕಷ್ಟಕ್ಕೀಡಾದ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಮಸ್ಯೆ ಆಲಿಸಿದ್ರು. ಸಿಎಂ ಬೊಮ್ಮಾಯಿಯವರಿಗೆ ಸಚಿವರಾದ ಆರ್ ಅಶೋಕ್, ಕೆ ಗೋಪಾಲಯ್ಯ, ವಿ.ಸೋಮಣ್ಣ, ಸಂಸದ ಪಿ.ಸಿ. ಮೋಹನ್ , ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಪೊಲೀಸ್ ಕಮಿಷನರ್ ಸಿ.ಹೆಚ್.ಪ್ರತಾಪ್ ರೆಡ್ಡಿ ಬಿಬಿಎಂಪಿ, ಜಲಮಂಡಳಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಸಾಥ್ ನೀಡಿದರು.
ಈ ವೇಳೆ ಜನ ಆಕ್ರೋಶ ವ್ಯಕ್ತಪಡಿಸುವುದರ ಜೊತೆಗೆ ಮುಖ್ಯಮಂತ್ರಿಯನ್ನ ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆಯಿತು.