ಮುಂದಿನ ಬಜೆಟ್ಟೂ ನಂದೇ ಎಂದು ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ರಾಹುಲ್ ಗಾಂಧಿ ಜೊತೆ ಡಿಕೆ ಶಿವಕುಮಾರ್ ಮೀಟಿಂಗ್

Sampriya

ಬುಧವಾರ, 19 ಮಾರ್ಚ್ 2025 (19:07 IST)
Photo Courtesy X
ಬೆಂಗಳೂರು:  ಡಿಸಿಎಂ ಡಿಕೆ ಶಿವಕುಮಾರ್ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾಗಿದ್ದಾರೆ.

ಸದನದಲ್ಲಿ ಮುಂದಿನ ಬಜೆಟ್ಟೂ ನಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾಗಿರುವುದು ಭಾರೀ ಕುತೂಹಲವನ್ನು ಮೂಡಿಸಿದೆ.

ಸಿಎಂ ಬದಲಾವಣೆ ಕುರಿತು ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆ ಜೊರಾಗಿ ನಡೆಯುತ್ತಿರುವ ಬೆನ್ನಲ್ಲೇ ಮುಂದಿನ ವರ್ಷವೂ ಬಜೆಟ್ ಮಂಡಿಸುವುದು ನಾನೇ ಎಂದು ಸಿದ್ದರಾಯ್ಯ ಹೇಳಿದ್ದರು.

ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಬಣ ಹಾಗೂ ಡಿಕೆಶಿ ಬಣಗಳ ಮಧ್ಯೆ ಭಾರೀ ಚರ್ಚೆ ನಡೆಯುತ್ತಿದೆ. ಈ ಬೆನ್ನಲ್ಲೇ ಇದೀಗ ರಾಹುಲ್ ಗಾಂಧಿಯನ್ನು ಡಿಕೆ ಶಿವಕುಮಾರ್ ಭೇಟಿಯಾಗಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇನ್ನೂ ಈ ಭೇಟಿ ಬಗ್ಗೆ ಡಿಕೆಶಿ ಏನನ್ನೂ ಬಿಟ್ಟುಕೊಟ್ಟಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ