15,000 ಶಿಕ್ಷಕರ ನೇಮಕಾತಿಗಾಗಿ ಸಿಇಟಿ 2022 ಪರೀಕ್ಷೆ ನಡೆಸಿದ ಕರ್ನಾಟಕ ಶಿಕ್ಷಣ ಇಲಾಖೆ
ಕರ್ನಾಟಕ ಶಿಕ್ಷಣ ಇಲಾಖೆಯು 15,000 ಶಿಕ್ಷಕರ ನೇಮಕಾತಿಗಾಗಿ ಸಿಇಟಿ 2022 ಪರೀಕ್ಷೆಯನ್ನು ನಡೆಸಿದೆ. ಶಾಲೆಗಳು ಆರಂಭವಾಗಿ ಶಿಕ್ಷಕರ ಕೊರತೆಯನ್ನು ಎದುರಿಸುತ್ತಿದ್ದರು ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗುತ್ತಿದೆ. ಸಿಇಟಿಯ ಪರೀಕ್ಷೆ ಫಲಿತಾಂಶ ಅಂದರೆ ಆಯ್ಕೆ ಪಟ್ಟಿಯನ್ನು ಜುಲೈ ಕೊನೆಯಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಸಿಇಟಿ ಪರೀಕ್ಷೆಯ ಮೌಲ್ಯಮಾಪನದ ಕಾರ್ಯ ನಡೆಯುತ್ತಿದೆ ಎರಡು ಪತ್ರಿಕೆಯ ಮೌಲ್ಯ ಮಾಪನ ಮುಗಿದಿದೆ. ಸ್ಕಾನ್ ಮಾಡಿ ಮೌಲ್ಯಮಾಪನ ಮಾಡಲಾಗುತ್ತಿದ್ದು ಜುಲೈ ಕೊನೆಯ ವೇಳೆಗೆ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಕಟ್ ಆಫ್ ಪರ್ಸೆಂಜೇಜ್ ಮತ್ತು ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸಚಿವ ಬಿಸಿ ನಾಗೇಶ್ ಮಾಹಿತಿಯನ್ನು ನೀಡಿದ್ದಾರೆ.