ಬಿಗ್ ಬ್ರೇಕಿಂಗ್! ಮೇ 12 ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ

ಮಂಗಳವಾರ, 27 ಮಾರ್ಚ್ 2018 (11:11 IST)
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾಧಿಕಾರಿ ಒಪಿ ರಾವತ್ ದಿನಾಂಕ ಪ್ರಕಟಿಸಿದ್ದಾರೆ.

ಮೇ 12 ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಮೇ 15 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಒಪಿ ರಾವತ್ ಘೋಷಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 4,96,357 ಮತದಾರರಿದ್ದಾರೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 28 ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ರಾವತ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಒಟ್ಟು 56 ಸಾವಿರ ಪೋಲಿಂಗ್ ಬೂತ್ ಗಳಿರಲಿವೆ. 56,696 ಮತಗಟ್ಟೆಗಳಿರಲಿವೆ. ಮತದಾನಕ್ಕೆ ಇವಿಎಂ ಜತೆಗೆ ವಿವಿ ಪ್ಯಾಟ್ ಗಳನ್ನು ಬಳಸಲಾಗುವುದು. ದಿವ್ಯಾಂಗರಿಗೆ ವಿಶೇಷ ವೋಟಿಂಗ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಚುನಾವಣಾ ಆಯುಕ್ತ ರಾವತ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ