ಬೆಂಗಳೂರು: ಈ ತಿಂಗಳಿನಿಂದ ಅನ್ನಭಾಗ್ಯ ಅಕ್ಕಿಯ ಬಾಬ್ತು ನೀಡಲಾಗುವ ಹಣದ ಬದಲು ಅಕ್ಕಿಯನ್ನೇ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ಈಗ ಅಕ್ಕಿಯೂ ಇಲ್ಲ, ಹಣವೂ ಇಲ್ಲ ಎಂಬ ಪರಿಸ್ಥಿತಿಯಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳ ಪಡಿತರ ವಿತರಣಾ ಕೇಂದ್ರದ ಮುಂದೆ ನೋ ಸ್ಟಾಕ್ ಎಂಬ ಬೋರ್ಡ್ ಹಾಕಲಾಗಿದೆ. ಅಂದರೆ ಅನ್ನಭಾಗ್ಯ ಅಕ್ಕಿ ಸಿಗುತ್ತದೆ ಎಂದು ಪಡಿತರ ಕೇಂದ್ರಕ್ಕೆ ತೆರಳುವ ಫಲಾನುಭವಿಗಳಿಗೆ ಶಾಕ್ ಕಾದಿದೆ.
ಮಾರ್ಚ್ 11 ರಿಂದ ಪಡಿತರ ವಿತರಣೆ ಆರಂಭವಾಗಿತ್ತು .ಆದರೆ ಎರಡೇ ದಿನಗಳಲ್ಲಿ ಎಲ್ಲವೂ ಖಾಲಿಯಾಗಿದೆ. ಈಗ 15 ಕೆ.ಜಿ. ಅಕ್ಕಿಯೂ ಇಲ್ಲ, ಹಣವೂ ಇಲ್ಲ ಎಂಬ ಪರಿಸ್ಥಿತಿ ಫಲಾನುಭವಿಗಳದ್ದಾಗಿದೆ.
ಬೆಂಗಳೂರು, ದಾವಣಗೆರೆ, ಯಾದಗಿರಿ, ಶಿವಮೊಗ್ಗ, ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಈಗ ಫಲಾನುಭವಿಗಳಿಗೆ ಅಕ್ಕಿ ಸಿಗುತ್ತಿಲ್ಲ. ಕೇಳಿದರೆ ಸ್ಟಾಕ್ ಖಾಲಿಯಾಗಿದೆ ಎಂಬ ಉತ್ತರ ಬರುತ್ತಿದೆ. ಇದಕ್ಕೆ ಸರ್ಕಾರ ಶೀಘ್ರವೇ ಸ್ಪಂದಿಸಬೇಕಿದೆ.