ಉದ್ಯಮಿಗಳ ಒತ್ತಡಕ್ಕೆ ಮಣಿಯಿತಾ ಸರ್ಕಾರ? ಕನ್ನಡಿಗರಿಗೆ ಮೀಸಲಾತಿಗೆ ತಡೆ

Krishnaveni K

ಗುರುವಾರ, 18 ಜುಲೈ 2024 (09:45 IST)
ಬೆಂಗಳೂರು: ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಧೇಯಕ ಪಾಸ್ ಮಾಡಿ ಬೀಗಿದ್ದ ರಾಜ್ಯ ಸರ್ಕಾರಕ್ಕೆ ಈಗ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಈಗ ಮಸೂದೆಗೆ ತಾತ್ಕಾಲಿಕ ತಡೆ ನೀಡಿದೆ.

ಈ ಮೊದಲು ವಿಧೇಯಕದಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50 ರಷ್ಟು, ಇತರೆ ಹುದ್ದೆಗಳಲ್ಲಿ ಶೇ.75 ಮತ್ತು ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಶೇ.100 ರಷ್ಟು ಕನ್ನಡಿಗರಿಗೆ ಮೀಸಲಾತಿ ಎಂದು ಹೇಳಲಾಗಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡಿದ್ದರು. ಆದರೆ ಸಿಎಂ ಟ್ವೀಟ್ ಮಾಡುತ್ತಿದ್ದಂತೇ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗಿತ್ತು.

ಕೆಲವೊಂದು ಉದ್ಯೋಗಗಳಿಗೆ ಕೌಶಲ್ಯ ಅಗತ್ಯವಿದೆ. ಖಾಸಗಿ ಸಂಸ್ಥೆಗಳ ನೇಮಕಾತಿ ವಿಚಾರದಲ್ಲಿ ತಲೆ ಹಾಕಬೇಡಿ ಎಂದು ಉದ್ಯಮಿಗಳು ಎಚ್ಚರಿಕೆ ನೀಡಿದ್ದರು. ಇದರ ನಂತರ ಸರ್ಕಾರ ಕೊಂಚ ಮೆತ್ತಗಾಗಿದೆ. ಉದ್ಯಮಿಗಳನ್ನು ಎದುರು ಹಾಕಿಕೊಂಡರೆ ಆರ್ಥಿಕತೆಗೆ ಧಕ್ಕೆಯಾಗುತ್ತದೆ. ಹೀಗಾಗಿ ಈಗ ವಿಧೇಯಕದ ಬಗ್ಗೆ ಪುನರ್ ಪರಿಶೀಲನೆ ನಡೆಸಲು ತೀರ್ಮಾನಿಸಿದೆ.

ಮುಂದಿನ ದಿನಗಳಲ್ಲಿ ಉದ್ಯಮಿಗಳೊಂದಿಗೆ ಸಮಾಲೋಚಿಸಿಯೇ ನಿಯಮ ರೂಪಿಸುವುದಾಗಿ ಹೇಳಿದೆ. ತರಾತುರಿ ಮಾಡಿ ಮತ್ತಷ್ಟು ಸಿಲುಕುವುದು ಬೇಡ ಎಂದು ತೀರ್ಮಾನಕ್ಕೆ ಬರಲಾಗಿದೆ. ಸ್ವತಃ ಸಂಪುಟ ಸಹೋದ್ಯೋಗಿಗಳಿಂದಲೇ ಸರ್ಕಾರದ  ನಿರ್ಧಾರಕ್ಕೆ ಆಕ್ಷೇಪ ಕೇಳಿಬಂದಿದೆ. ಹೀಗಾಗಿ ಈಗ ವಿದೇಯಕಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ