ಕರ್ನಾಟಕದಲ್ಲಿ ನೀಟ್ ಇರಲ್ಲ, ವೈದ್ಯಕೀಯ ಶಿಕ್ಷಣ ಪ್ರವೇಶಾತಿಗೆ ಸಿಇಟಿನೇ ಫೈನಲ್

Krishnaveni K

ಮಂಗಳವಾರ, 23 ಜುಲೈ 2024 (10:43 IST)
ಬೆಂಗಳೂರು: ನೀಟ್ ಪರೀಕ್ಷೆಗಳಲ್ಲಿ ಅಕ್ರಮ ನಡೆದ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸುತ್ತಿರುವ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿ ನೀಟ್ ರದ್ದುಗೊಳಿಸಿ ವೈದ್ಯಕೀಯ ಪರೀಕ್ಷೆಗಳಿಗೆ ಸಿಇಟಿಯನ್ನೇ ಫೈನಲ್ ಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಇಂದು ಅಥವಾ ನಾಳೆ ಸದನದಲ್ಲಿ ನಿರ್ಣಯ ಮಂಡಿಸಲಿದೆ.

ವೈದ್ಯಕೀಯ ಪರೀಕ್ಷೆಗಾಗಿ ರಾಷ್ಟ್ರಮಟ್ಟದಲ್ಲಿ ನಡೆಯುವ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಹಲವು ಗೊಂದಗಳಿವೆ. ಈಗಾಗಲೇ  ಈ ಪರೀಕ್ಷೆಯಲ್ಲಿ ಅಕ್ರಮಗಳು ಬಯಲಾಗಿವೆ. ನೀಟ್ ಪರೀಕ್ಷೆಯಿಂದ ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಇಲ್ಲಿನ ವಿದ್ಯಾರ್ಥಿಗಳು ಮೆರಿಟ್ ಸೀಟ್ ಸಿಗದೇ ಅವಕಾಶ ವಂಚಿತರಾಗುತ್ತಿದ್ದಾರೆ ಎಂದು ಕರ್ನಾಟಕ ಸರ್ಕಾರದ ವಾದವಾಗಿದೆ.

ಈಗಾಗಲೇ ತಮಿಳುನಾಡು ನೀಟ್ ರದ್ದುಗೊಳಿಸಿ ಸದನದಲ್ಲಿ ನಿರ್ಣಯ ಅಂಗೀಕರಿಸಿದೆ. ಇದೀಗ ಕರ್ನಾಟಕದಲ್ಲೂ ಇದೇ ಮಾದರಿಯಲ್ಲಿ ನೀಟ್ ರದ್ದುಗೊಳಿಸಿ ಮುಂದಿನ ದಿನಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ.

ಈಗಾಗಲೇ ಬಹುತೇಕ ಸಚಿವರು ಸರ್ಕಾರದ ನಡೆಯನ್ನು ಒಪ್ಪಿಕೊಂಡಿವೆ. ವೈದ್ಯಕೀಯ ಕೋರ್ಸ್ ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ ಸಿಇಟಿ ಪರೀಕ್ಷೆ ನಡೆಸುವ ಬಗ್ಗೆ ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಕಳುಹಿಸಿಕೊಡಲಿದೆ. ಈ ವಿಚಾರ ಇಂದು ಅಥವಾ ನಾಳೆ ಸದನದಲ್ಲಿ ಅಂಗೀಕರವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ