ಸ್ಟೀಲ್ ಬ್ರಿಡ್ಜ್ ಯೋಜನೆ ರದ್ದುಗೊಳಿಸಿದ ಸರ್ಕಾರ!

ಗುರುವಾರ, 2 ಮಾರ್ಚ್ 2017 (11:34 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ವಿವಿಧ ಸಂಘಟನೆಗಳ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಇದೀಗ ಸ್ವತಃ ರಾಜ್ಯ ಸರ್ಕಾರವೇ ರದ್ದುಗೊಳಿಸಿದೆ. ಯಾವುದೇ ಅಡ್ಡಿ ಎದುರಾದರೂ ಯೋಜನೆ ಕೈ ಬಿಡುವುದಿಲ್ಲ ಎಂದಿದ್ದ ರಾಜ್ಯಸರ್ಕಾರ ಇದೀಗ  ಇಂತಹದ್ದೊಂದು ನಿರ್ಧಾರಕ್ಕೆ ಬಂದಿದೆ.


ಈ ಮೊದಲು ಗೋವಿಂದರಾಜು ಅವರ ಡೈರಿಯಲ್ಲಿ ಸ್ಟೀಲ್ ಬ್ರಿಡ್ಜ್ ಯೋಜನೆಗೆ ಸಿಎಂ ಸಿದ್ಧರಾಮಯ್ಯ 65 ಕೋಟಿ ರೂ ಕಪ್ಪ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಉಲ್ಲೇಖವಾಗಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು. ಇದರ ನಡುವೆ ಹಲವು ಸಂಘಟನೆಗಳೂ ಯೋಜನೆ ವಿರುದ್ಧ ಧ್ವನಿಯೆತ್ತಿದ್ದವು. ಇದೆಲ್ಲಾ ಹಿನ್ನಲೆಯಲ್ಲಿ ಸರ್ಕಾರ ಇಂತಹ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

ಸರ್ಕಾರ ಯೋಜನೆಯನ್ನು ರದ್ದುಗೊಳಿಸುವುದರೊಂದಿಗೆ ಆರೋಪ ಮಾಡಿದ್ದ ಬಿಜೆಪಿಗೆ ಬಲ ಬಂದಂತಾಗಿದೆ. ಆದರೆ ಪಕ್ಷಕ್ಕೆ ಹೆಚ್ಚಿನ ಹಾನಿಯಾಗದಂತೆ ಸರ್ಕಾರ ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ