ಸಂಪನ್ಮೂಲ ಸಂಗ್ರಹಣೆಯಲ್ಲಿ ಹಿನ್ನಡೆ ಇಫೆಕ್ಟ್ ಗ್ಯಾರಂಟಿ ಯೋಜನೆ ಮೇಲೆ

Krishnaveni K

ಶನಿವಾರ, 19 ಅಕ್ಟೋಬರ್ 2024 (10:04 IST)
ಬೆಂಗಳೂರು: ಸಂಪನ್ಮೂಲ ಸಂಗ್ರಹಣೆಯಲ್ಲಿ ಹಿನ್ನಡೆಯಾಗಿರುವ ಕಾರಣಕ್ಕೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವ ಬಗ್ಗೆ ಭಾರೀ ಚರ್ಚೆಯಾಗಿತ್ತು. ಬಳಿಕ ಸಿಎಂ ಸಿದ್ದರಾಮಯ್ಯನವರೇ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದರು. ಆದರೆ ಈ ನಡುವೆ ನಿಜವಾಗಿಯೂ ಬಿಪಿಎಲ್ ಕಾರ್ಡ್ ದಾರರು ಅರ್ಹರೇ, ಅನರ್ಹರೇ ಎಂದು ಲೆಕ್ಕ ಹಾಕಲು ಆಹಾರ ಮತ್ತು ನಾಗರಿಕ ಇಲಾಖೆ ಮುಂದಾಗಿತ್ತು.

ಇದೀಗ ಹಣಕಾಸು ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ರಾಜ್ಯದಲ್ಲಿ ಸಂಪನ್ಮೂಲ ಸಂಗ್ರಹಣೆಯಲ್ಲಿ ಶೇ.4 ರಷ್ಟು ಕುಸಿತವಾಗಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗಿದ್ದಾರೆ.

ಅರ್ಹರು, ಅಗತ್ಯವಿರುವವರನ್ನು ಮಾತ್ರ ಗ್ಯಾರಂಟಿ ಫಲಾನುಭವಿಗಳಾಗಿ ಮಾಡಲು ಸೂಚನೆ ನೀಡಿದ್ದಾರೆ. ಈ ಮೂಲಕ ವೆಚ್ಚ ಕಡಿತಕ್ಕೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಮುಂದೆ ಕೆಲವೊಂದು ಗ್ಯಾರಂಟಿ ಯೋಜನೆ ನಿಜವಾಗಿ ಅರ್ಹರಾದವರಿಗೆ ಮಾತ್ರ ಸಿಗುವಂತೆ ಮಾಢಬಹುದು. ಇದರಿಂದಾಗಿ ಗ್ಯಾರಂಟಿ ಯೋಜನೆಯಲ್ಲಿ ಕೆಲವು ಬದಲಾವಣೆಯಾಗಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ