ಇಂದಿನಿಂದ ಇದೇ 17 ರವರೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಹೇಳಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ವರದಿ ಹೇಳಿದೆ.
ನಿನ್ನೆ ರಾತ್ರಿ ಸಾಧಾರಣ ಮಳೆ ಆರಂಭವಾಗಿದೆ. ರಾತ್ರಿ ಒಂದು ಗಂಟೆ ನಂತರ ಕೆಲವು ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ಇನ್ನೂ ಕೆಲವು ಪ್ರದೇಶಗಳಲ್ಲಿ ಮುಂಜಾನೆ 3 ರಿಂದ ಭಾರಿ ಮಳೆ ದಾಖಲಾಗಿದೆ. ನಗರದ ಪಶ್ಚಿಮ ಭಾಗದ ಲಕ್ಷ್ಮೀನಾರಾಯಣ ಪುರ. ಬಸವೇಶ್ವರನಗರ. ಗಾಯತ್ರಿ ನಗರಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿನ ಹಲವು ಮನೆಗಳ ನಿವಾಸಿಗಳು ತೀವ್ರ ಆತಂಕಿತರಾಗಿದ್ದಾರೆ. ಮಳೆನೀರನ್ನು ಹೊರ ಹಾಕುವುದರಲ್ಲಿ ತೊಡಗಿಸಿಕೊಂಡಿದ್ದಾರೆ.