ಕರ್ನಾಟಕ ಲೇಟೆಸ್ಟ್ ಹವಾಮಾನ ವರದಿ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Krishnaveni K

ಸೋಮವಾರ, 15 ಜುಲೈ 2024 (09:36 IST)
ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದು ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ. ಕರಾವಳಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೆಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಎರಡು ವಾರದಿಂದ ನಿರಂತರ ಮಳೆಯಾಗುತ್ತಲೇ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನದಿ ಮತ್ತು ಸಮುದ್ರದ ದಡಗಳಿಗೆ ತೆರಳದಂತೆ ಸಾರ್ವಜನಿಕರು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಸಮುದ್ರ ದಡದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಜುಲೈ 15 ರಂದು ರೆಡ್ ಅಲರ್ಟ್, ಜುಲೈ 16 ರಿಂದ 18 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದೆ. ಆದರೆ ನಿರೀಕ್ಷಿಸಿದಷ್ಟು ಮಳೆಯಾಗುತ್ತಿಲ್ಲ. ಇದುವರೆಗೆ ಕರಾವಳಿ ಮತ್ತು ಮಲೆನಾಡಿನಲ್ಲೇ ಹೆಚ್ಚು ಮಳೆಯಾಗುತ್ತಿದೆ. ಮುಂದಿನ ಒಂದು ವಾರ ಕಾಲ ಮಳೆ ಹೆಚ್ಚಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಕರೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ