ಬೆಂಗಳೂರಿನಲ್ಲಿ ಶುರುವಾಯ್ತು ಮಳೆ, ಕರ್ನಾಟಕದ ಆರು ಜಿಲ್ಲೆಗಳಿಗೆ ಮಳೆ ಅಲರ್ಟ್

Krishnaveni K

ಗುರುವಾರ, 14 ನವೆಂಬರ್ 2024 (12:08 IST)
ಬೆಂಗಳೂರು: ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯ ವಾತಾವರಣವಿದ್ದು, ಇಂದು ಬೆಳಿಗ್ಗೆಯಿಂದಲೇ ಮಳೆಯಾಗುತ್ತಿದೆ. ಕರ್ನಾಟಕದ ಆರು ಜಿಲ್ಲೆಗಳಿಗೆ ಯೆಲ್ಲೊ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ತಿಳಿಸಿತ್ತು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದೆ. ನಿನ್ನೆಯೂ ಮೋಡ ಕವಿದ ವಾತಾವರಣವಿತ್ತು. ಇಂದು ಮಳೆ ಶುರುವಾಗಿದೆ.

ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮಳೆಯಾಗಲಿದ್ದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಕೊಡಗು, ಚಿತ್ರದುರ್ಗ, ರಾಮನಗರ, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಕನಿಷ್ಠ ಉಷ್ಣಾಂಶ 18 ಡಿಗ್ರಿ, ಗರಿಷ್ಠ ಉಷ್ಣಾಂಶ 24.8 ಡಿಗ್ರಿಯಷ್ಟು ದಾಖಲಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಕೆಲವು ದಿನಗಳಿಂದ ಬಿಡುವು ಪಡೆದಿದ್ದ ವರುಣ ಈಗ ಮತ್ತೆ ಪ್ರತ್ಯಕ್ಷನಾಗಿದ್ದಾನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ