ಕರ್ನಾಟಕ ಹವಾಮಾನ ವರದಿ: ಸೈಕ್ಲೋನ್ ಮಳೆ ಇನ್ನೆಷ್ಟು ದಿನ

Krishnaveni K

ಶುಕ್ರವಾರ, 13 ಡಿಸೆಂಬರ್ 2024 (09:50 IST)
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್ ನಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮಳೆಯಾಗುತ್ತಿದೆ. ಇನ್ನು ಎಷ್ಟು ದಿನ ಸೈಕ್ಲೋನ್ ಇಫೆಕ್ಟ್ ಇರಲಿದೆ ಇಲ್ಲಿದೆ ಡೀಟೈಲ್ಸ್.

ನಿನ್ನೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದೂ ಮಳೆಯ ವಾತಾವರಣ ಮುಂದುವರಿದಿದೆ. ಬೆಳಿಗ್ಗೆಯಿಂದ ದಟ್ಟ ಮೋಡ ಕವಿದ ವಾತಾವರಣ, ತುಂತುರು ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಇನ್ನು ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿತ್ರದುರ್ಗ, ರಾಮನಗರ, ಕೊಡಗು, ಹಾಸನ, ರಾಯಚೂರು, ವಿಜಯನಗರ, ಯಾದಗಿರಿ, ಕೊಪ್ಪಳ, ಕಲಬುರಗಿ, ಧಾರವಾಡ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ವಿಪರೀತ ಮಳೆಯಿಂದಾಗಿ ಚುಮು ಚುಮು ಚಳಿಯ ವಾತಾವರಣವಿದೆ. ಇಂದು ರಾಜಧಾನಿಯಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿಯಷ್ಟಿದ್ದರೆ ಕನಿಷ್ಠ ಉಷ್ಣಾಂಶ 17.2 ಡಿಗ್ರಿಯಷ್ಟಿದೆ. ನಿನ್ನೆಗೆ ಹೋಲಿಸಿದರೆ ಇಂದು ಮತ್ತಷ್ಟು ಚಳಿಯ ವಾತಾವರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ