ಹವಾಮಾನ ಇಲಾಖೆಯ ವರದಿ ಪ್ರಕಾರ ಇಂದು ಕರ್ನಾಟಕದ ಕೆಲವು ಭಾಗಗಳಲ್ಲಿ, ತಮಿಳುನಾಡು, ಕೇರಳದಲ್ಲಿ ಮಳೆಯಾಗಲಿದೆ. ಇದಲ್ಲದೆ ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್ ಘಡ, ಲಕ್ಷದ್ವೀಪ, ಗೋವಾ, ಒಡಿಶಾ ಮತ್ತು ಅಂಡಮಾನ್ ಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ವಿಚಾರಕ್ಕೆ ಬಂದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳವರೆಗೆ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಯಿದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯಲ್ಲಿ ಹನಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಕರಾವಳಿ ಭಾಗಕ್ಕೆ ಮಾತ್ರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.